Anganwadi Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 13593 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹೌದು ಸ್ನೇಹಿತರೆ ಇದೇ ಮೊದಲ ಬಾರಿಗೆ ಅಂಗನವಾಡಿ ಕಾರ್ಯಕರ್ತರ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಯಾರು ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ರೈತರ ಖಾತೆಗೆ ಬರ ಪರಿಹಾರ ಹಣ ಬಿಡುಗಡೆ ಈ ರೀತಿ ಸರ್ವೇ ನಂಬರ್ ಹಾಕಿ ಹಣ ಸೆಟ್ ಮಾಡಿ ಇಲ್ಲಿದೆ ಮಾಹಿತಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿ ಹುದ್ದೆಗಳ (Anganwadi Recruitment) ನೇಮಕಾತಿ..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಕಾಲಿ ಇರುವಂತ ಸುಮಾರು 13,593 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿಯುಳ್ಳವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕೇಂದ್ರಗಳಲ್ಲಿ ಕಾಲಿರುವಂತ ಕಾರ್ಯಕರ್ತರು ಹಾಗೂ ಸಹಾಯಕರ ಹುದ್ದೆಗೆ ನೇಮಕಾತಿ ಕರೆಯಲಾಗಿದ್ದು ಇಲ್ಲಿ ಅರ್ಜಿ ಸಲ್ಲಿಸಲು ಒಂದು ಶರತ್ತು ಇದೆ
ಏನೆಂದರೆ ಆಯಾ ಜಿಲ್ಲೆಯವರು ಹಾಗೂ ಆಯಾ ಸ್ಥಳದವರು ಅಂದರೆ ಸ್ಥಳೀಯರು ತಮ್ಮ ಜಿಲ್ಲೆಯಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದನ್ನು ಪರಿಗಣಿಸಲು ಸರ್ಕಾರ ನಿಮ್ಮ ವಾಸ ಸ್ಥಳ ದೃಢೀಕರಣ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ನಂಬರ್, DAR ನಂಬರ್ ಮತ್ತು ಆ ಗ್ರಾಮಕ್ಕೆ ಸಂಬಂಧಿಸಿದ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ ವ್ಯಾಪ್ತಿ ಒಳಗೆ ಇರುವಂತವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಖಾಲಿ ಇರುವ ಹುದ್ದೆಗಳ (Anganwadi Recruitment) ವಿವರ..?
ನೇಮಕಾತಿ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಹುದ್ದೆಯ ಹೆಸರು:-
- ಅಂಗನವಾಡಿ ಕಾರ್ಯಕರ್ತಯಾರ ಹುದ್ದೆ
- ಅಂಗನವಾಡಿ ಸಹಾಯಕಿ ಹುದ್ದೆ
ಖಾಲಿ ಹುದ್ದೆಗಳ ಸಂಖ್ಯೆ:- 13593
ಸಂಬಳ :- ನೇಮಕಾತಿ ಪ್ರಕಾರ
ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆ (Anganwadi Recruitment)..?
- ಈ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 35 ವರ್ಷದ ಒಳಗಿನವರ ಆಗಿರಬೇಕು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮೀಸಲಾತಿ ಆಧಾರದ ಮೇಲೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಕಾಲ ಸಡಿಲಿಕೆ ಇದೆ
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು
- ಅಂಗನವಾಡಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 12ನೇ ತರಗತಿ ಪಾಸ್ ಆಗಿರಬೇಕು
ಅರ್ಜಿ ಸಲ್ಲಿಸಲು (Anganwadi Recruitment) ಬೇಕಾಗುವ ದಾಖಲಾತಿಗಳು..?
- ವಾಸಸ್ಥಳ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ವಿದ್ಯಾರ್ಹತೆ ಪ್ರಮಾಣ ಪತ್ರ
- ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಅಂಕಪಟ್ಟಿ
- ವಿಶೇಷ ಚೇತನರಾಗಿದ್ದರೆ ಅಂತವರ ದೃಢೀಕರಣ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Anganwadi Recruitment)…?
ಪ್ರಾರಂಭ ದಿನಾಂಕ:-12/07/2024
ಕೊನೆಯ ದಿನಾಂಕ:- 12/08/2024
ಹೌದು ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಅಗಸ್ಟ್ 12 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗೆ ಆದಷ್ಟು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ (Anganwadi Recruitment)..?
ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮೇಲೆ ಕಾಣಿಸುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ಅಲ್ಲಿ ನಿಮ್ಮ ಜಿಲ್ಲೆ ಮತ್ತು ತಾಲೂಕು ಹಾಗೂ ಇತರ ಎಲ್ಲಾ ವೈಯಕ್ತಿಕ ವಿವರಗಳನ್ನು ಸರಿಯಾಗಿ ಆಯ್ಕೆ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಹಾಗೂ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿನಿಯರಿಗೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡಲು ಬಯಸುವಂತಹ ಜನರಿಗೆ ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು