labour card scholarship:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಕರ್ನಾಟಕ ಕಟ್ಟಡ ಕಾರ್ಮಿಕ ಹಾಗೂ ಹಾಗೂ ಕಾರ್ಮಿಕ ಇಲಾಖೆ ಕಡೆಯಿಂದ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರಿಂದ ಎಷ್ಟು ಹಣ ಸಿಗುತ್ತೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಪಿಎಂ ಕಿಸಾನ್ ಯೋಜನೆ ರೈತರಿಗೆ ಸಿಗಲಿದೆ ₹13500 ಹಣ ಬೇಗ ಈ ಎರಡು ಕೆಲಸ ಮಾಡಿ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ಲೇಬರ್ ಕಾರ್ಡ್ ಹೊಂದಿದಂತ ಕೂಲಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ 6 ರಿಂದ 12ನೇ ತರಗತಿ ಹಾಗೂ ಪದವಿ ಮತ್ತು ಇತರ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಲೇಖನ ಕೆಳಭಾಗದಲ್ಲಿ ನೀಡಿದ್ದೇವೆ
ಕರ್ನಾಟಕ ಸರ್ಕಾರ ಕಡೆಯಿಂದ ಉಚಿತ ಹೊಲಿಗೆ ಅಂತರ ವಿತರಣೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (labour card scholarship)..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯದಲ್ಲಿರುವಂತ ಕಾರ್ಮಿಕ ಕಲ್ಯಾಣ ಮಂಡಳಿ ಮತ್ತು ಕರ್ನಾಟಕ ರಾಜ್ಯದ ಕಟ್ಟಡ ಕಾರ್ಮಿಕರ ಇಬ್ಬರ ಮಕ್ಕಳಿಗೆ ಉನ್ನತ ಶಿಕ್ಷಣ ಮಾಡಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು
ಈ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ತಮ್ಮ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಹಾಯಧನವನ್ನು ಪಡೆದುಕೊಳ್ಳಬಹುದು ಈ ವಿದ್ಯಾರ್ಥಿ ಸಹಾಯ ಧನವು 1,1100 ರಿಂದ ಗರಿಷ್ಠ 20 ಸಾವಿರ ರೂಪಾಯಿವರೆಗೆ ನೀಡಲಾಗುತ್ತದೆ ಹಾಗೂ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಆ ವಿವರವನ್ನು ಕೆಳಗಡೆ ವಿವರಿಸಿದ್ದೇವೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಇರುವ ಅರ್ಹತೆಗಳು (labour card scholarship)..?
- ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ಹೊಂದಿರಬೇಕು ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿ ಯಲ್ಲಿ ನೊಂದಣಿ ಮಾಡಿಕೊಂಡಿರುವ ಅಂತಹ ಕಾರ್ಮಿಕರಾಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 1,25,000 ಗಿಂತ ಕಡಿಮೆ ಇರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಸಾಮಾನ್ಯವಾಗಿ ಸೇರಿದ ವಿದ್ಯಾರ್ಥಿಯು ಇಂದಿನ ತರಗತಿಯಲ್ಲಿ ಕನಿಷ್ಠ 50% ಅಂಕ ಪಡೆದಿರಬೇಕು
- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಯು ಕನಿಷ್ಠ 45% ಅಂಕ ಗಳಿಸಿರಬೇಕು
ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (labour card scholarship)..?
- 1 ರಿಂದ 4ನೇ ತರಗತಿ :- ₹1,100/-
- 5 ರಿಂದ 8ನೇ ತರಗತಿ :- ₹1,250/-
- 9 ರಿಂದ 10ನೇ ತರಗತಿ:- ₹6,000/-
- puc & ITI, DP,TCH :- ₹8,000/-
- ಪದವಿ ವಿದ್ಯಾರ್ಥಿಗಳಿಗೆ:- ₹10,000/-
- ಸ್ನಾತಕೋತ್ತರ ಕೋರ್ಸ್ ಗಳು:- ₹12,000/-
- ಇಂಜಿನಿಯರಿಂಗ್ & ವೈದ್ಯಕೀಯ:- ₹20,000/-
ಈ ಮೇಲೆ ನೀಡಿದಂತೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಮುಂದುವರೆಸಲು ವಿದ್ಯಾರ್ಥಿ ಸಹಾಯ ಧನ ಸಿಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (labour card scholarship)..?
- ವಿದ್ಯಾರ್ಥಿ ಪೋಷಕರ ಲೇಬರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ವಯಕ್ತಿಕ ವಿವರಗಳು & ಶೈಕ್ಷಣಿಕ ದಾಖಲಾತಿಗಳು
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಹಾಗೂ ಇನ್ನಿತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (labour card scholarship)..?
ಹೌದು ಸ್ನೇಹಿತರೆ, ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಈ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಲೇಬರ್ ಕಾರ್ಡ್ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ್ದರು ಅಲ್ಲಿ ಕೇಳಲಾದಂತೆ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಇತರ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬಹುದು ಜೊತೆಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಆಗಬಹುದು