pm Scholarship apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ 75,000 ರಿಂದ 1,20,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು? ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನದ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ (NTA) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮೂಲಕ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ನಂತರ ಪರೀಕ್ಷೆ ಬರೆಯಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಉಚಿತ ಹೂಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಪ್ರಾರಂಭವಾಗಿದೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ (pm Scholarship apply)…?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿರುವಂತ ಹಿಂದುಳಿದ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಯಿತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಮೊದಲು ಪ್ರವೇಶ ಪರೀಕ್ಷೆ ಬರೆಯಬೇಕಾಗುತ್ತದೆ ನಂತರ ಆಯ್ಕೆಯಾದ ವಿದ್ಯಾರ್ಥಿಗಳಿಗೆ 75,000 ಇಂದ 1,20,000 ವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
ಈ ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ OBC, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿಗಳು ಬುಡಕಟ್ಟು ವಿದ್ಯಾರ್ಥಿಗಳು ಹಾಗೂ DNT ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 9ನೇ ತರಗತಿ ಹಾಗೂ 11ನೇ ತರಗತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಈ ವಿದ್ಯಾರ್ಥಿ ವೇತನ ಕೆಲವು ನಿರ್ದಿಷ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಸಿಸುವ ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು
ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯ (pm Scholarship apply) ಪ್ರಯೋಜನಗಳು..?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯವನ್ನು ಪಡೆಯಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕಾರ್ಯಕ್ಷಮತೆ ಆಧಾರದ ಮೇಲೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಗುತ್ತದೆ ಅಂದರೆ 75,000 ಇಂದ 1,20,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ಸಿಗುತ್ತದೆ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (pm Scholarship apply)…?
9ನೇ ತರಗತಿ:- ಹೌದು ಸ್ನೇಹಿತರೆ ಪ್ರಸ್ತುತ 2024 ಮತ್ತು 25 ನೇ ಸಾಲಿನಲ್ಲಿ 9ನೇ ತರಗತಿ ಪ್ರವೇಶ ಪಡಿತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ವಯಸ್ಸು ಜನವರಿ 1 2004 & ಮಾರ್ಚ್ 31 2008ರ ಒಳಗಡೆ ಜನಿಸಿರಬೇಕು
11ನೇ ತರಗತಿ ವಿದ್ಯಾರ್ಥಿಗಳು:- ಹೌದು ಸ್ನೇಹಿತರೆ ಮೆಟ್ರಿಕ್ ನಂತರ 11ನೇ ತರಗತಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಈ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮಾನದಂಡಗಳು (pm Scholarship apply)..?
ಶೈಕ್ಷಣಿಕ ಅರ್ಹತೆ:- ಪಿಎಂ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು 8ನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ 2024 ವರ್ಷಕ್ಕೆ ಸಂಬಂಧಿಸಿದಂತೆ ಹತ್ತನೇ ತರಗತಿ ಪಾಸ್ ಆಗಿರಬೇಕು
ಈ ವರ್ಗದ ವಿದ್ಯಾರ್ಥಿಗಳು:- ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು OBC, EBC, DNT SAR/ NT, SNT ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ
ಪೋಷಕರ ಆದಾಯ ಮಿತಿ:- ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಆದಾಯ 2.5 ಲಕ್ಷ ರೂಪಾಯಿ ಒಳಗಡೆ ಇರಬೇಕು
ಭಾರತದ ನಿವಾಸಿ:- ಪಿಎಂ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ನಿವಾಸಿಗಳಾಗಿರಬೇಕು
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (pm Scholarship apply)..?
- ಪ್ರಾರಂಭ ದಿನಾಂಕ:- 11/07/2024
- ಕೊನೆಯ ದಿನಾಂಕ :- 17/08/2024
- ಪರೀಕ್ಷೆಯ ದಿನಾಂಕ :- 29/09/2024
ಹೌದು ಸ್ನೇಹಿತರೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಆಗಸ್ಟ್ 17 2024 ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಮತ್ತು ಅರ್ಜಿ ಸಲ್ಲಿಸಿದಂತೆ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 29 ಶುಕ್ರವಾರ ದಿನ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm Scholarship apply)..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಇಂದಿನ ತರಗತಿ ಮಾರ್ಕ್ಸ್ ಕಾರ್ಡ್
- 9 ಮತ್ತು 11ನೇ ತರಗತಿಯ ಪ್ರವೇಶ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ (pm Scholarship apply)..?
ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಂಡಿದ್ದರೆ ಹಾಗೂ ಇದೇ ರೀತಿ ನೀವು ಪ್ರತಿದಿನ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಬೇಗ ಪಡೆದುಕೊಳ್ಳಲು ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು