PMAY 2.0: ಉಚಿತ ಮನೆ ಪಡೆಯಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ 2025 ಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಮೂಲಕ ಇದೀಗ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಹಾಗೂ ಮನೆ ಇಲ್ಲದಂತ ಜನರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಮುಂದಿನ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ನಿರ್ಮಲ ಸೀತಾರಾಮನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ

ಆದ್ದರಿಂದ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ವಿದ್ಯಾರ್ಥಿಗಳಿಗೆ ಸಿಗಲಿದೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಇಲ್ಲಿದೆ ನೋಡಿ ವಿವರ
ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY 2.0).?
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ದುರ್ಬಲ ವರ್ಗದ ಜನರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಮನೆ ಕಟ್ಟಿಸುವ ಉದ್ದೇಶದಿಂದ ಅಥವಾ ಮನೆ ನಿರ್ಮಾಣ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಗಿದೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ
ಗ್ರಾಮೀಣ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗ್ರಾಮೀಣಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಈ ಒಂದು ಗ್ರಾಮೀಣ ಪಟ್ಟಿಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 1.70 ಲಕ್ಷದವರೆಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡಲಾಗುತ್ತದೆ
ನಗರ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ನಗರಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಈ ಒಂದು ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಮಾಧ್ಯಮ ವರ್ಗದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 2.70 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ
PMAY 2.0 ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- PMAY 2.0 ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2,50,000 ಕಡಿಮೆ ಇರಬೇಕು
- ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರಿ ಹೊಂದಿರಬಾರದು
- ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಹಾಗೂ ವೃದ್ಧರಿಗೆ ಮತ್ತು ಅಂಗವಿಕಲರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು
PMAY 2.0 ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವೋಟರ್ ಐಡಿ
- ಇತರೆ ದಾಖಲಾತಿಗಳು
PMAY 2.0 ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯಲು ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಬೇಗ ಮಾಹಿತಿ ಸಿಗುತ್ತದೆ
1 thought on “PMAY 2.0: ಉಚಿತ ಮನೆ ಪಡೆಯಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ”